ಮಂಡ್ಯ : ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಕೊಳಗೇರಿ ನಿವಾಸಿಗಳಿಗೆ ಕೂಡಲೇ ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಕೊಳಗೇರಿ ನಿವಾಸಿಗಳು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ ಮತ್ತು ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲೆ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಸಾಯಂಕಾಲ 4.30 ರ ಸಮಯ ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನೆರೆದ ನೂರಾರು ಮಂದಿ ಕೊಳಗೇರಿ ನಿವಾಸಿಗಳು ಪ್ರತಿಭಟನೆ ನಡೆಸಿದರಲ್ಲದೆ ಕೊಳಗೇರಿ ಅಭಿವೃದ್ಧಿ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿದರು.