ಯಾದಗಿರಿ ತಾಲೂಕಿನ ಅಬ್ಬೆ ತುಮಕೂರ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕಲ್ಪಿಸಲು ಆಗ್ರಹಿಸಿ ಕಳೆದ ನಾಲ್ಕು ದಿನಗಳ ಹಿಂದೆ ಜಿಟಿ ಜಿಟಿ ಮಳೆಯಲ್ಲಿಯೇ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ್ ನೇತ್ರತ್ವದಲ್ಲಿ ಸಾರ್ವಜನಿಕರು ಕೈಯಲ್ಲಿ ಛತ್ರಿ ಹಿಡಿದು ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಗೆ ಸ್ಪಂದಿಸಿರುವ ಜಿಲ್ಲಾ ಪಂಚಾಯಿತಿ ಸಿಇಓ ಲವೀಶ್ ಓರಡಿಯಾ ಅವರು ಶುಕ್ರವಾರ ಮಧ್ಯಾಹ್ನ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ಅವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ, ಅಲ್ಲದೆ ಒಂದು ವಾರದಲ್ಲಿ ಎಲ್ಲಾ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.