ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ ಧಕ್ಕೆಯಾಗುತ್ತಿದೆ. ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದ ಬೆಳೆ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಭಾನುವಾರ ಬೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿದರು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕರೆಯ ಹೊಲದಲ್ಲಿನ ಹೆಸರು ಬೆಳೆ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು.