ಮೊಳಕಾಲ್ಮುರು:- ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ಶುಕ್ರವಾರ ಮಧ್ಯಾನ 12:30ಕ್ಕೆ ನಡೆಯಿತು. ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮೀನಾಕ್ಷಿ ಶಿವಣ್ಣ ಮಾತ್ರ ಉಮೇದುವಾರಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮೀನಾಕ್ಷಿ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ತಹಶೀಲ್ದಾರ್ ಟಿ ಜಗದೀಶ ಘೋಷಣೆ ಮಾಡಿದರು. ಬಿಜೆಪಿ ಬೆಂಬಲಿತ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಇವರನ್ನು ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ರಾಮರೆಡ್ಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ನೇರ್ಲಹಳ್ಳಿ ಇದ್ದರು.