ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ಮಂಗಳವಾರ ಸಂಜೆ 7-00 ಗಂಟೆಗೆ ನಡೆದ ತುಂಗಭದ್ರಾ ಆರತಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇದೇ ಪ್ರಥಮ ಬಾರಿಗೆ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದ ತುಂಗಭದ್ರಾ ನದಿತೀರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಕಾರ್ಯಕ್ರಮವನ್ನು ಪವಿತ್ರ ತೀರ್ಥ ಕ್ಷೇತ್ರ ಕಾಶಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಗಂಗಾ ಆರತಿ ಮಾಡುವ 15 ಅರ್ಚಕರು ತುಂಗಭದ್ರಾ ಆರತಿ ಮಹೋತ್ಸವವನ್ನು ನೆರವೇರಿಸಿದರು.