ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ ಬೆಳಗ್ಗೆ 10ಕ್ಕೆ ಪ್ರಮುಖ ಮಾರ್ಗಗಳ ಮೂಲಕ ಶ್ರದ್ಧಾ ಭಕ್ತಿಯ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪೌರಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ರಾಜ್ಯ ಹಜ್ ಕಮಿಟಿ ಸದಸ್ಯ ಮನ್ಸೂರ್ ಖಾದ್ರಿ, ಗಣ್ಯರಾದ ಅಬ್ದುಲ್ ಮನ್ನಾನ್ ಸೇಠ, ನಗರಸಭೆ ಸದಸ್ಯ ನವಾಜಖಾನ್ ಸಾಬ್ ಮತ್ತಿತರ ಗಣ್ಯರು ಹಾಜರಿದ್ದರು.