ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಹೇಳಿದರು. ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಕುರಿತ ಜಿಲ್ಲಾ ಮಟ್ಟದ ಸಂಘ ಸಂಸ್ಥೆಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ತಿಳಿಸಿದರು.