ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಕಾವೇರಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದೆ.