ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಎರಡು ಸ್ಲಾಟ್‌ಗಳಲ್ಲಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು. ಸೆಪ್ಟಂಬರ್ 1 ರಿಂದ ಜಾರಿಗೆ ಬರುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಾಹಿತಿ ತಿಳಿಸಿದೆ. ವಾಹನಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆಯವರೆಗೆ- ಹೀಗೆ ಎರಡು ಸ್ಲಾಟ್‌ಗಳಲ್ಲಿ ದಿನವಹಿ ಒಟ್ಟು 600 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇವುಗಳಲ್ಲಿ ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾಗಳ ಸಂಖ್ಯೆಯನ್ನು 100