ಚನ್ನಪಟ್ಟಣ ತಾಲ್ಲೂಕಿನ ಹೊಟ್ಟಿಗನಹೊಸಹಳ್ಳಿ, ಮಿಣಿಕೆರೆ ದೊಡ್ಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯೋಗೀಶ್ವರ್ ಶಂಕುಸ್ಥಾಪನೆ ಮಾಡಿದರು. ಸೋಮವಾರ ಜಿಲ್ಲಾ ಪಂಚಾಯಿತಿ ಅನುದಾನದ ಅಡಿಯಲ್ಲಿ ರಸ್ತೆ ಮತ್ತು ಡ್ರೈನೇಜ್ ನಿರ್ಮಾಣ ಕಾಮಗಾರಿಗಳಿಗೆ ಗ್ರಾಮಸ್ಥರ ಜೊತೆಗೂಡಿ ಗುದ್ದಲಿ ಪೂಜೆ ನೆರವೇರಿಸಿದರು. ಈಗಾಗಲೇ ನಮ್ಮ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಹಣ ಬಂದಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲಾಗುತ್ತದೆ ಎಂದರು.