ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಬುಧವಾರ ಮಧ್ಯಾನ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ಅಂಗವಾಗಿ ಅದ್ದೂರಿ ಮೆರವಣಿಗೆ ನಡೆಸಲಾಯಿತು. ತೆರೆದ ಟ್ರ್ಯಾಕ್ಟರ್ ನಲ್ಲಿ ಗಣೇಶನ ಮೂರ್ತಿಯ ಮೆರವಣಿಗೆ ಸಂದರ್ಭದಲ್ಲಿ ಸುರ್ಪುರ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಭಾಗವಹಿಸಿ ಮಹಾತ್ಮ ಗಾಂಧಿ ವೃತ್ತದಲ್ಲಿ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಡೊಳ್ಳುಗಳ ಮೇಳ,ವಾದ್ಯಗಳ ಮೇಳ ಜೊತೆಗೆ ಭಾಗವಹಿಸಿದ್ದ ಸಾವಿರಾರು ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.