ಮೊಳಕಾಲ್ಮುರು:ನಾಗಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಾಸೀನಾ ಬಾನು ಶಬ್ಬೀರ್ ಬಾಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ಮಹಾಂತಕ್ಕ ರಮೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರದಂದು ಚುನಾವಣೆ ನಡೆಯಿತು.ಚುನಾವಣೆಗೆ ಯಾಸಿನ್ ಬಾನು ಶಬ್ಬೀರ್ ಬಾಷಾ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು ಆದ್ದರಿಂದಾಗಿ ಮಧ್ಯಾಹ್ನ 12 ಗಂಟೆಗೆ ಚುನಾವಣಾಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಪ್ರಭಾರ ತಹಸೀಲ್ದಾರ್ ನಾಗವೇಣಿಯವರು ಯಾಸಿನ್ ಬಾನು ಶಬ್ಬೀರ್ ಬಾಷಾ ಅವರನ್ನು ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.