ಕಾಲು ಸಂಕದ ಮೇಲಿಂದ ಕಾಲು ಜಾರಿ ಹೊಳೆಗೆ ಬಿದ್ದಿದ್ದ ವ್ಯಕ್ತಿಯ ಮೃತದೇಹ ಸಿಕ್ಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಸಮೀಪದ ಮಿನಿಗರಡಿ ಗ್ರಾಮದ ಚಂದ್ರೇಗೌಡ (55) ಎಂಬುವವರ ಮೃತದೇಹ ಪತ್ತೆಯಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.