ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣ ಬಳಿಯಲ್ಲಿ ಬೈಕ್ ಸವಾರನೊಬ್ಬ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಗುರಸುಣಗಿ ಗ್ರಾಮದ ಅಲಿಸಾಬ್ ಎಂದು ಹೇಳಲಾಗಿದ್ದು ಟಿವಿಎಸ್ ಎಕ್ಸೆಲ್ ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಬಿದ್ದು ನರಳಾಟವನ್ನು ನಡೆಸಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.