ವಿಜಯಪುರ ನಗರದ ಗೃಹ ಕಚೇರಿಯಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ಸಚಿವರ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ನಿರಂತರ ಮಳೆಯ ಅವಾಂತರಕ್ಕೆ ಈರುಳ್ಳಿ ಬೆಳೆಯು ಸಂಪೂರ್ಣವಾಗಿ ಹಾಳಾಗಿದ್ದು ಪರಿಹಾರ ಒದಗಿಸಿ ಕೊಡಬೇಕು ಎಂದು ಮನವಿ ಮಾಡಿದರು. ಇನ್ನು ಅಧಿಕಾರಿಗಳೊಂದಿಗೆ ಮಾತನಾಡಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡುವ ಭರವಸೆಯನ್ನು ಸಚಿವರು ನೀಡಿದರು.