ತುರ್ತು ಪರಿಸ್ಥಿತಿಯಲ್ಲಿ ಜೀವ ಉಳಿಸಿ. ಆಂಬುಲೆನ್ಸ್ ಡ್ರೈವರ್ಸ್ ಹಾಗೂ ಆರೋಗ್ಯ ಸಿಬ್ಬಂದಿಗಳ ಜತೆ ಪೊಲೀಸ್ ಸಂವಾದ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲು ಸಲಹೆ. ದೊಡ್ಡಬಳ್ಳಾಪುರ. ತುರ್ತು ವಾಹನ( ಆಂಬುಲೆನ್ಸ್) ಚಾಲಕರು ರಸ್ತೆ ಅಪಘಾತ ಸಂಭವಿಸಿದ ಸಂದರ್ಭಗಳಲ್ಲಿ ಗಾಯಾಳು ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಜೀವ ಉಳಿಸುವ ಕೆಲಸ ಮಾಡಬೇಕು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಸಾಧಿಕ್ ಪಾಷಾ ತಿಳಿಸಿದರು.