ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಎಸ್ಪಿ ಮಿಥುನ್ ಕುಮಾರ್ ಈ ಕುರಿತು ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು 12 ಸೆಕೆಂಡು ವಿಡಿಯೋ ಗಮನಕ್ಕೆ ಬಂದಿದೆ. ಭದ್ರಾವತಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನ ರಚಿಸಿದ್ದೇವೆ ವಿಡಿಯೋವನ್ನು ಈಗಾಗಲೇ ಕಳುಹಿಸಲಾಗಿದೆ. ಅದಕ್ಕಾಗಿ ಒಂದು ತಂಡವನ್ನು ರಚನೆ ಮಾಡಿದ್ದೇವೆ.ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.