ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 44 ರ ಕೇಶ್ವಾಪುರ ಮಧುರಾ ಇಸ್ಟೇಟ್ ಸಮುದಾಯ ಭವನದಲ್ಲಿ ಕಾರ್ಯಕರ್ತರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ಹು-ಧಾ ಮಹಾನಗರ ಪಾಲಿಕೆಯ ಉಪಮಹಾಪೌರರಾದ ಸಂತೋಷ ಚೌವ್ಹಾಣ್, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ರಾಜು ಕಾಳೆ, ಪಾಲಿಕೆ ಸದಸ್ಯರಾದ ಶ್ರೀಮತಿ ಉಮಾ ಮುಕುಂದ, ಅಶೋಕ ವಾಲ್ಮೀಕಿ ಹಾಗೂ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.