ಮದುವೆಗೆ ಹೊರಟಿದ್ದ ಮದನ್ 23 ವರ್ಷ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಇಂದಿರಾ ನಗರ ಬಳಿ ನಡೆದಿದೆ. ಸೆಪ್ಟೆಂಬರ್ 13 ರಂದು ಬೆಳಗ್ಗೆ 10-30 ಗಂಟೆಗೆ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಜಾಗರೂಕ ಓವರ್‌ಟೇಕ್ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು, ಹಿಂಬದಿಯಿಂದ ಬಂದ ಟ್ರಕ್ ಗೆ ಮದನ್ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಅತಿವೇಗ, ಅಜಾಗರೂಕ ಓವರ್‌ಟೇಕ್ ಜೀವ ಕಸಿದುಕೊಳ್ಳುತ್ತದೆ. ರಸ್ತೆ ನಿಯಮ ಪಾಲನೆ ನಮ್ಮೆಲ್ಲರ ಕರ್ತವ್ಯ ವಾಗಿದೆ ಎಂದು ಪ್ರತ್ಯೇಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ