ಕುಂದಾಪುರ ತಾಲೂಕು ಕರ್ಕುಂಜೆ ಗ್ರಾಮದ ಮುಕ್ಕೋಡು ರಾಜೀವ ಶೆಟ್ಟಿ ಎಂಬವರ ಕ್ಯಾಟರಿಂಗ್ ಶೆಡ್ ನಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ತಮ್ಮ ಸ್ವಂತ ಲಾಭಕ್ಕಾಗಿ ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಎಂಬ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದಾರೆಂದು ಖಚಿತ ಮಾಹಿತಿ ದೊರೆತಿದ್ದು, ಅದರಂತೆ ಸದ್ರಿ ಸ್ಥಳಕ್ಕೆ ಭೀಮಾಶಂಕರ ಸಿನ್ನೂರ ಸಂಗಣ್ಣ, ಪೊಲೀಸ್ ಉಪನಿರೀಕ್ಷಕರ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ 11 ಜನ ಆರೋಪಿಗಳನ್ನ ಬಂಧಿಸಲಾಗಿದೆ.