ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಕಕ್ಷಿದಾರರನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸುವ ಪ್ರಯತ್ನ ಮಾಡಲಾಗುತ್ತಿದೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಬಾಗಡೆ ಹೇಳಿದರು. ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಸೆ.13 ರ ಶನಿವಾರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಈ ವರ್ಷದ ಮೂರನೇ ಲೋಕ ಅದಾಲತ್ ಇಂದು ನಡೆದಿದೆ. ಈವರೆಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. 25 ಲಕ್ಷಕ್ಕೂ ಹೆಚ್ಚಿನ ಹಣವನ್ನು ರಾಜಿ ಸಂಧಾನದಲ