ಚಿತ್ರದುರ್ಗ:-ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಬೆಳಿಗ್ಗೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಸಚಿವ ಡಿ. ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲೆಯಲ್ಲಿನ ರಾಜ್ಯ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆ ಹಾಗೂ ತಗ್ಗು-ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳ ಕುರಿತು ಸಭೆ ಚರ್ಚೆಯಾಯಿತು. ಮಳೆಯಿಂದಾಗಿ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಪ್ರಮುಖ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ, ಅವುಗಳನ್ನು ಯಾವಾಗ ಮುಚ್ಚಿಸುತ್ತೀರಿ, ಯಾವಾಗ ಕಾಮಗಾರಿ ಪ್ರಾರಂಭಿಸುತ್ತೀರಿ ಎಂದು ಕೇಳಿದರು.