ಜನನ-ಮರಣ ನೊಂದಣಿ ವಿಳಂಬ ಮಾಡುವ ಅಧಿಕಾರಿಗಳ ಅಮಾನುತು ಹಾಗೂ ಇಲಾಖೆ ವಿಚಾರಣೆಗೆ ಶಿಫಾರಸ್ಸು:ನಗರದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ******************** ಚಿತ್ರದುರ್ಗ ಆಗಸ್ಟ್ 29: ಜನನ ಹಾಗೂ ಮರಣ ದಿನದಿಂದ 21 ದಿನದ ಒಳಗಾಗಿ ನೊಂದಣಿ ಮಾಡುವುದು ಸಂಬಂಧಪಟ್ಟ ಅಧಿಕಾರಿ ಕರ್ತವ್ಯವಾಗಿದೆ. ನಿಗದಿತ ಅವಧಿಯೊಳಗೆ ನೊಂದಣಿ ಮಾಡದೆ, ನಿರ್ಲಕ್ಷ್ಯ ತೋರಿ ವಿಳಂಬ ಮಾಡುವ ಅಧಿಕಾರಿಗಳನ್ನು ಅಮಾನುತುಗೊಳಿಸಿ, ಅವರ ವಿರುದ್ದ ಇಲಾಖೆ ವಿಚಾರಣೆಗೆ ಶಿಫಾರಸ್ಸು ಮಾಡುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.