ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಯರ್ರಕೋಟ ಮಂಜುನಾಥ್ ರವರು ಪ್ರಯತ್ನ ಪಡುತ್ತಿದ್ದು ಒಂದು ಗ್ರಾಮವನ್ನು ದತ್ತು ಪಡೆದು ಅದನ್ನು ಮಾದರಿ ಗ್ರಾಮವನ್ನಾಗಿಸಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಸೆಪ್ಟೆಂಬರ್ 4 ರಿಂದ ಸ್ವಗ್ರಾಮ ಯರ್ರಕೋಟದಿಂದ ಫ್ರೀಡಂ ಪಾರ್ಕ್ ವರೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯರವರು ಅವರಿಗೆ ಬೆಂಬಲವಾಗಿ ನಿಲ್ಲಬೇಕು ಹಾಗೂ ಅವರ ಕಾರ್ಯಕ್ರಮಗಳನ್ನ ಯಶಸ್ವಿಯಾಗುವ ನಿಟ್ಟಿನಲ್ಲಿ ಸೂಕ್ತ ರೀತಿಯ ಸಹಕಾರ ನೀಡಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ವೆಂಕಟೇಶ್ ಅವರು ಇಂದು ತಿಳಿಸಿದ್ದಾರೆ.