ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಗ್ರಾಮದ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಬುದುವಾರ ರಾತ್ರಿ ಇಂತಹ ದೃಶ್ಯ ಕಂಡು ಬಂದಿದ್ದು ಗ್ರಾಮದ ಜನರು ಜೆಸ್ಕಾಂ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ವಿದ್ಯುತ್ ಕಂಬಗಳಿದ್ದರೂ ದೀಪಗಳಿಲ್ಲದೆ ಗ್ರಾಮ ಕತ್ತಲಲ್ಲಿ ಕಾಲ ಕಳೆಯುತ್ತಿದೆ. ಮುಖ್ಯ ರಸ್ತೆ ಹಾಗೂ ಓಣಿಗಳಲ್ಲಿ ಜನರು ಮನೆ ಹಿಂದೆ ಹೊರಗೆ ಬರದಂತಾಗಿದ್ದು ಜೆಸ್ಕಾಂ ಇಲಾಖೆ ಅಧಿಕಾರಿಗಳು ಕೂಡಲೇ ಗ್ರಾಮದಲ್ಲಿನ ಸಮಸ್ಯೆ ಪರಿಹರಿಸಿ ಎಲ್ಲಾ ಕಂಬಗಳಿಗೂ ವಿದ್ಯುತ್ ಬಲ್ಬ್ ಹಾಕಿಸುವಂತೆ ಒತ್ತಾಯಿಸಿದ್ದಾರೆ.