ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹೇಳಿದರು. ಶನಿವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಐತಿಹಾಸಿಕವಾದುದು. ಇದನ್ನು ಜಾರಿಗೊಳಿಸಬೇಕಾದ ಹೊಣೆ ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ರಾಜ್ಯ ಸರ್ಕಾರ ನಾಗಮೋಹನದಾಸ್ ಅವರ ವರದಿಯಂತೆ 5 ವಿಭಾಗಗಳಲ್ಲಿ ಮೀಸಲಾತಿಯನ್ನು ವಿಂಗಡಿಸಿದ್ದನ್ನು ಮೂರು ವರ್ಗಕ್ಕೆ ಸೀಮಿತಗೊಳಿಸಿ ಆದೇಶ ಹೊರಡಿಸಿದೆ