ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಲೇಔಟ್ ಗಳು ಮತ್ತು ಕಟ್ಟಡಗಳ ನಿರ್ಮಾಣದ ಸಂದರ್ಭ ನಿಯಮ ಉಲ್ಲಂಘನೆಯಾಗುತ್ತಿದ್ದು, ಕೆಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಇದೆ ಎಂದು ಮಾನವ ಹಕ್ಕುಗಳ ಅಂತರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿಯಮ ಉಲ್ಲಂಘಿಸಿ ನಡೆಯುತ್ತಿರುವ ಯೋಜನೆ ಮತ್ತು ಕಾಮಗಾರಿಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಲೇಔಟ್ ಗಳನ್ನು ಖುದ್ದಾಗಿ ಪರಿಶೀಲಿಸಿ ಜನರ ತೆರಿಗೆ ಹಣ ಪೋಲಾಗದಂತೆ ಮತ್ತು ಸರಕಾರದ ಆಸ್ತಿ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಬೇಕು. ಲೇಔಟ್ ವೊಂದಕ್ಕೆ ಭೂಪರಿವರ್ತನೆ