ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ ಕೋಲಾರ ನಗರದ ಹೃದಯ ಭಾಗದಲ್ಲಿರುವ ಡಿ. ವಿ. ಗುಂಡಪ್ಪ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಗುರುವಾರ ಸಂಜೆ ೫: ೩೦ ರಂದು ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು ಎಂದು ತಿಳಿಸಿ, ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಂಡರು.