ಸೆಪ್ಟೆಂಬರ್ 22 ರಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಿದ್ಧತೆಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ಸರ್ಕಾರದ ನಿರ್ದೇಶನದಂತೆ ಕೈಗೊಳ್ಳಲು ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುತ್ತಿರುವ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡ