ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ಉತ್ಸವದಲ್ಲಿ ಸರ್ವಧರ್ಮಿಯರು ಭಾಗವಹಿಸುವ ಮೂಲಕ ಸಾಮರಸ್ಯ ಮೆರೆದಿದ್ದಾರೆ. ಬುದುವಾರ ಮಧ್ಯಾಹ್ನ ಇಂತಹ ದೃಶ್ಯ ಕಂಡು ಬಂದಿದ್ದು, ಮುಸ್ಲಿಂ ಸಮುದಾಯದ ಯುವತಿಯರು ಕೂಡ ಗಣೇಶನ ದರ್ಶನವನ್ನು ಪಡೆದು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ರಾತ್ರಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.