ವಿಪತ್ತುಗಳ ಮೂಲಕ ಸಂಕಷ್ಟಗಳು ಬಂದೆರಗಿದಾಗ ನಿಸ್ವಾರ್ಥವಾಗಿ ಸರ್ಕಾರದೊಂದಿಗೆ ಕೈಜೋಡಿಸಿ ನೆರವು ನೀಡುವ ರೆಡ್ ಕ್ರಾಸ್ ಸಂಸ್ಥೆ ಮಾನವೀಯತೆಗೆ ಸದಾ ಸ್ಪಂದಿಸುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅವರು ಅಭಿಪ್ರಾಯಪಟ್ಟರು. ಗುರುವಾರ ನಗರದ ಶ್ರೀ ಕೃಷ್ಣ ಸ್ಮೃತಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಅರ್ಹ ಫಲಾನುಭವಿಗಳಿಗೆ ಗೃಹ ಉಪಯೋಗಿ ಹಾಗೂ ಆರೋಗ್ಯ ತಪಾಸಣಾ ಉಪಕರಣಗಳ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.