ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ರವರ ಅಧ್ಯಕ್ಷತೆಯಲ್ಲಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಹಾಗೇಯೆ ಗ್ರಾಮ ಪಂಚಾಯಿತಿಗಳ ಘನ ತ್ಯಾಜ್ಯವನ್ನು ನಗರಸಭೆ ವ್ಯಾಪ್ತಿಯ ತ್ಯಾಜ್ಯ ನಿರ್ವಹಣಾ ಘಟಕಗಳಲ್ಲಿ ವಿಲೇವಾರಿ ಮತ್ತು ನಿರ್ವಹಣೆ ಮಾಡುವಂತೆ ಸಿಇಒರವರು ಸೂಚಿಸಲಾಯಿತು