ಕಳೆದ ಕೆಲವು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆಯಿಂದ ಯಾದಗಿರಿ ತಾಲೂಕಿನ ಚಾಮನಹಳ್ಳಿ ಯಿಂದ ಹೊರುಂಚಾ ಗ್ರಾಮಗಳಿಗೆ ಹೋಗುವ ರಸ್ತೆ ಕಿತ್ತುಕೊಂಡು ಹೋಗಿ ವಾಹನ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗಿತ್ತು.ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದ್ದರು.ಹೋರಾಟಕ್ಕೆ ಸ್ಪಂದಿಸಿರುವ ಜಿಲ್ಲಾ ಆಡಳಿತ ಮಂಗಳವಾರ ಬೆಳಗ್ಗೆಯಿಂದ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗಿದ್ದು,ಈ ಸ್ಥಳಕ್ಕೆ ಭೇಟಿ ನೀಡಿದ ಉಮೇಶ ಮುದ್ನಾಳ ಶರೀರ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ ಅಲ್ಲದೆ ಶಾಶ್ವತವಾಗಿ ಪರಿಹಾರ ಕಲ್ಪಿಸಲು ರಸ್ತೆ ನಿರ್ಮಾಣ ಮಾಡಬೇಕು,ದುರಸ್ತಿ ಮಾಡಿದರೆ ಮತ್ತೆ ಸಮಸ್ಯೆ ಉಂಟಾಗಲಿದೆ ಎಂದು ಒತ್ತಾಯಿಸಿದ್ದಾರೆ.