ಉಗಾರ ಬುದ್ರುಕ ಗ್ರಾಮದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಉಗಾರ ಬುದ್ರುಕ ಗ್ರಾಮದಲ್ಲಿ ಗುರುವಾರ ಚೈತಾಲಿ ಸಾವಿಗೆ ಕಾರಣನಾದ ಪತಿ ಹಾಗೂ ನ್ಯಾಯವಾದಿ ಪ್ರದೀಪ್ ಕಿರಣಗಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಉಗಾರ ಬುದ್ರುಕ ಗ್ರಾಮದ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ (೨೨) ಅವರನ್ನು ಪತಿ ಕೊಲೆ ಮಾಡಿರುವ ಘಟನೆಗೆ ಆಕ್ರೋಶ ವ್ಯಕ್ತಪಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು, ಗ್ರಾಮಸ್ಥರು, ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ