ಔರಾದ್ : ಕಾರ್ಯಕ್ರಮಗಳು, ಜೀವನದ ಸವಿ ನೆನಪುಗಳನ್ನು ಶಾಶ್ವತವಾಗಿ ನಮ್ಮ ನೆನಪಿನಲ್ಲಿ ಇರಿಸಲು ಪ್ರಮುಖ ಪಾತ್ರ ವಹಿಸುವ ಛಾಯಾಗ್ರಾಹಕರ ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇರುತ್ತದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು. ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ, ಔರಾದ(ಬಿ) ತಾಲ್ಲೂಕಾ ಫೋಟೊಗ್ರಾಫರ್ ಅಸೋಸಿಯೇಷನ್ ವತಿಯಿಂದ ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಏರ್ಪಡಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಚಾಲನೆ ನೀಡಿ ಮಾತನಾಡಿದರು.