ಅನೇಕ ಮಂದಿಯ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ನಂತೂರ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕ ರಸ್ತೆ ದುರಸ್ತಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.