ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ನಗದು ಹಣ ಸಹಿತ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಸ್ಟೇಷನ್ ತಾಂಡಾದಲ್ಲಿ ನಡೆದಿದ್ದು, ಸೆ7 ರಂದು ಬೆಳಗ್ಗೆ 10.30 ಕ್ಕೆ ಮಾಹಿತಿ ಲಭ್ಯವಾಗಿದೆ.. ಶಿವಕುಮಾರ್ ಸ್ಥಾವರಮಠ ಎಂಬುವರಿಗೆ ಸೇರಿದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಡಾಗಿ ಬೆಂಕಿ ಹೊತ್ತಿಕೊಂಡಿದ್ದು, 75 ಸಾವಿರ ರೂಪಾಯಿ ನಗದು ಹಣ, ಮೊಬೈಲ್, ಟಿವಿ, ಫ್ಯಾನ್, ಬಟ್ಟೆ ಸೇರಿದಂತೆ 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇನ್ನೂ ಸ್ಥಳಕ್ಕೆ ಮಳಖೇಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.