ನಗರದ ತಹಸಿಲ್ದಾರ್ ಕಚೇರಿಯಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ ಜರುಗಿತು ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು ಸೆಪ್ಟೆಂಬರ್ 17ರಂದು ಜರಗುವ ಶ್ರೀ ವಿಶ್ವಕರ್ಮ ಜಯಂತಿ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅದ್ದೂರಿಯಾಗಿ ಆಚರಿಸುವಂತೆ ತಾಲೂಕ ದಂಡಾಧಿಕಾರಿಗಳು ತಾಲೂಕ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಸಂದರ್ಭದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳು ಸಮಾಜದ ಅನೇಕ ಜನ ಮುಖಂಡರು ಯುವಕರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು