ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ ಹಾಗೂ ಅದರ ಸುತ್ತಮುತ್ತಲಿನ ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾ