ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ವರಸಿದ್ಧಿ ಗಣೇಶ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ನಾಡದೇವತೆಗೆ ಮಂಗಳವಾರ ಸಾಯಂಕಾಲ 6ಗಂಟೆ ಸುಮಾರಿಗೆ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನತೆಗೆ ಒಳ್ಳೇದಾಗಲಿ ರೈತರ ಬದುಕು ಹಸನಾಗಲಿ ಎಂದು ಪ್ರತಿ ವರ್ಷ ನಾಡ ದೇವತೆಗೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಬಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ದೇವಸ್ಥಾನ ಕಮಿಟಿಯ ಸದಸ್ಯರುಗಳು ಉಪಸ್ಥಿತರಿದ್ದರು.