ಭದ್ರಾವತಿಯ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಂಗಳವಾರ ಭದ್ರಾವತಿಯ ಮಾಧವಚಾರ್ ವೃತ್ತದಲ್ಲಿ ಹಿಂದೂಪರ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು ಮಾಧವಚಾರ್ ವೃತ್ತದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತ್ತು. ಟೈಯರ್ ಗಳಿಗೆ ಬೆಂಕಿಯನ್ನು ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಒತ್ತಾಯಿಸಿದರು.