ಕೊಳ್ಳೇಗಾಲ: ತಾಲ್ಲೂಕಿನ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಂತೋಣಿ ದಿನೇಶ್ (56) ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಕೊಳ್ಳೇಗಾಲ ಪಟ್ಟಣದ ಸಂತ ಫ್ರಾನ್ಸಿಸ್ ಅಸಿಸ್ಸಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ, ಅವರು ಎದುರಾಳಿಯಾದ ಕಿರಣ್ ಕುಮಾರ್ (34) ವಿರುದ್ಧ ಗೆಲುವು ಸಾಧಿಸಿದರು. ಒಕ್ಕೂಟದ ಕಾರ್ಯದರ್ಶಿಯಾಗಿ ಸಿ. ನಾಗರಾಜು ಮತ್ತು ಖಜಾಂಜಿಯಾಗಿ ಅಮರೇಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಜೆ. ಉದಯಕುಮಾರ್ ಮಾಹಿತಿ ನೀಡಿದರು.