ದಸರಾ ಉತ್ಸವ ಅಂಗವಾಗಿ ನಿರ್ಮಾಣ ಮಾಡಲಿರುವ ಬೃಹತ್ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಬುಧವಾರ ಮಧ್ಯಾಹ್ನ 2 ರ ಸಮಯದಲ್ಲಿ ಭೂಮಿ ಪೂಜೆ ನೆರವೇರಿಸಿದರು. ತುಮಕೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಸಚಿವರು ಸೆ 22 ರಿಂದ 11 ದಿನಗಳ ಕಾಲ ನಡೆಯಲಿರುವ ತುಮಕೂರು ಜಿಲ್ಲಾ ದಸರಾ ಉತ್ಸವದ ಅಂಗವಾಗಿ ನಾಡದೇವಿ ಚಾಮುಂಡೇಶ್ವರಿಯನ್ನು ಪೂಜಿಸಿ ಹೋಮ-ಹವನ, ಮತ್ತಿತರ ಪೂಜಾ ಕೈಂಕರ್ಯಗಳನ್ನು ನಡೆಸಲು ಭವ್ಯವಾದ ಧಾರ್ಮಿಕ ಮಂಟಪವನ್ನು ನಿರ್ಮಿಸಲಾಗುವುದು ಎಂದರು.