ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸೋಮವಾರ ಸಂಜೆ 4 ಗಂಟೆಯಲ್ಲಿ ತುಮಕೂರು ದಸರಾ-2025 ಲಾಂಛನವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಕಳೆದ ವರ್ಷ ವಿನ್ಯಾಸಗೊಳಿಸಿದ್ದ ದಸರಾ ಲಾಂಛನವನ್ನೇ ದಸರಾ ಉತ್ಸವದ ಶಾಶ್ವತ ಲಾಂಛನವನ್ನಾಗಿಸಲು ನಿರ್ಣಯಿಸಲಾಗಿದೆ. ಮೈಸೂರು ದಸರಾ ಉತ್ಸವದ ಲಾಂಛನವು ಮಹಾರಾಜರ ಕಾಲದಿಂದಲೂ ಬಳಕೆಯಲ್ಲಿರುವಂತೆ ಜಿಲ್ಲೆಯಲ್ಲಿಯೂ ಕಳೆದ ವರ್ಷದ ಲಾಂಛನವನ್ನೇ ಅಂತಿಮಗೊಳಿಸಿ ಮುಂದಿನ ದಿನಗಳಲ್ಲಿ ಶಾಶ್ವತ ದಸರಾ ಲಾಂಛನವಾಗಿ ಬಳಕೆಯಾಗಲಿದೆ ಎಂದು ತಿಳಿಸಿದರು.