ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗೋ ಕಳ್ಳರ ಹಾವಳಿ ಮಿತಿ ಮೀರಿ ಹೋಗಿದೆ. ರಾತ್ರಿ ವೇಳೆ ಕಾರು ಗಳಲ್ಲಿ ಬಂದು ಗೋವುಗಳನ್ನು ಕಳ್ಳತನ ನಡೆಸುತ್ತಿದ್ದಾರೆ. ಕೊಪ್ಪ ಪಟ್ಟಣದ ಸಮೀಪದಲ್ಲಿ ಸೋಮವಾರ ಸಂಜೆ 6 ಗಂಟೆ ನಸುಕಿನಲ್ಲಿ ಗೋವುಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿರುವ ವಿಡಿಯೋ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋ ಕಳ್ಳತನ ಪದೆ ಪದೇ ಮರುಕಳುಹಿಸುತಿದೆ ಹೀಗಾಗಿ ಗೋ ಕಳ್ಳರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾತ್ರಿ ವೇಳೆ ಕಳ್ಳರು ಕಾರು ಗಳಿಗೆ ನಕಲಿ ನಂಬರ್ ಪ್ಲೇಟ್ಗಳನ್ನು ಬಳಸಿ ಗೋ ಕಳ್ಳತನ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.