ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಭದ್ರಾವತಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಕುಮಾರ್, ಷಡಕ್ಷರಿ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಣಿಶೇಖರ್, ಅಂತರಗಂಗೆ ಗ್ರಾಪಂ ಸದಸ್ಯ ನಾಗೇಶ್ ಹಾಗೂ ಶಾಸಕರ ಪುತ್ರ ಬಿ.ಎಸ್.ಗಣೇಶ್ ಉಪಸ್ಥಿತರಿದ್ದರು.