ವಿಜಯಪುರ ನಗರದ ಅಸರ್ ಮಹಲಗೆ ಮಂಗಳವಾರ ಸಾಯಂಕಾಲ 6ಗಂಟೆ ಸುಮಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಲಕ್ಷಾಂತರ ಜನರು ಅಸರ್ ಮಹಲ್ ನಲ್ಲಿ ಭಾಗಿಯಾಗಲಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ. ವ್ಯವಸ್ಥಿತವಾಗಿ ಹಬ್ಬವನ್ನು ಆಚರಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಅಸರ್ ಮಹಲನಲ್ಲಿ ವ್ಯವಸ್ಥೆಗಳ ಕುರಿತು ತಪಾಸಣೆ ಮಾಡಿದರು ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಮುಖಂಡರುಗಳು ಉಪಸ್ಥಿತರಿದ್ದರು.