ಹುಬ್ಬಳ್ಳಿ: ಗಣೇಶೋತ್ಸವ ಆಚರಣೆಗೆ ಡಿಜೆ ಬಳಸಲು ಅನುಮತಿ ನೀಡಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ಮುಸ್ಲಿಮರ ಎಲ್ಲ ಹಬ್ಬಗಳ ಆಚರಣೆಗಳಿಗೆ ಅನುಮತಿ ನೀಡಲಾಗುತ್ತಿದ್ದು, ಹಿಂದೂ ಹಬ್ಬಗಳಿಗೆ ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು. ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಇನ್ನೊಂದು ಕಾನೂನು ಸರಿಯಲ್ಲ ಎಂದರು. ಅಲ್ಲದೆ, ಮಸೀದಿಗಳ ಮೇಲಿನ ಸೌಂಡ್ ಸಿಸ್ಟಮ್‌ಗಳನ್ನು ಮೊದಲು ಬಂದ್ ಮಾಡಬೇಕು, ಇದರಿಂದ ಮಕ್ಕಳು, ವಯೋವೃದ್ಧರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.