ಕೋಲಾರ ತಾಲ್ಲೂಕಿನ ೩೦ ಕೆರೆ ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ ಕೋಲಾರ: ಕೆ. ಸಿ.ವ್ಯಾಲಿ ೨ ನೇ ಹಂತದ ಯೋಜನೆಯಡಿ ಲಕ್ಷ್ಮಿಸಾಗರ ಪಂಪ್ ಹೌಸ್ ನಿಂದ ಕೋಲಾರ ತಾಲ್ಲೂಕಿನ ೩೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಪಂಪ್ ಹೌಸ್ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ತಮ್ಮ ಕಾವೇರಿ ನಿವಾಸದಲ್ಲಿ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿದರು. ಕೋಲಾರ ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ತಾಲ್ಲೂಕಿನ ನರಸಾಪುರ ಹೋಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿನ ಕೆ.ಸಿ.ವ್ಯಾಲಿ ಯೋಜನೆಯ ಐದನೇ ಪಂಪಿಂಗ