ನಾಡಹಬ್ಬ ದಸರಾ ಅಂಗವಾಗಿ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಸೋಮವಾರ ತಡರಾತ್ರಿವರೆಗೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಗಾಯಕಿ ಸಮೇತ ಮಲ್ನಾಡ್ ಹಾಗೂ ಉತ್ತರ ಕರ್ನಾಟಕದ ಜಾನಪದ ಗಾಯಕ ಬಾಳು ಬೆಳಗುಂದಿ ಸೇರಿದಂತೆ ಅನೇಕ ಜನ ಯುವ ಗಾಯಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಹಾಡುಗಳನ್ನು ಹಾಡುವ ಮೂಲಕ ಜನರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಸಿಂಧನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಸಂಖ್ಯೆಯ ಜನರು ಭಾಗವಹಿಸಿದ್ದರು.